ಕೀಟನಾಶಕ ಸೇವಿಸಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೀಟನಾಶಕ ಸೇವಿಸಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅನುದೀಪ್ (16) ಎಂದು ಗುರುತಿಸಲಾಗಿದೆ. ಕಳೆದ ಅ.15 ರಂದು ಅನುದೀಪ್ ಕೀಟನಾಶಕ ಸೇವಿಸಿದ್ದ. ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆತೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು (ಮಂಗಳವಾರ) ಆತ ಮೃತಪಟ್ಟಿದ್ದಾನೆ.

ವಿದ್ಯಾರ್ಥಿಯ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!