ಹೊಸದಿಗಂತ ಡಿಜಿಟಲ್ ಡೆಸ್ಕ್:
ಹತ್ತನೇ ತರಗತಿ ಬಾಲಕಿಯೊಬ್ಬಳು ಹೆರಿಗೆ ಬಳಿಕ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ.
ಪಲಮನೇರು ಪ್ರದೇಶದ ಸ್ಥಳೀಯ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಯುವತಿಯ ಮೇಲೆ ಅತ್ಯಾಚಾರ ನಡೆದಿತ್ತು, ಆಕೆ ಗರ್ಭಿಣಿಯಾಗಿದ್ದಳು, ಹೀಗಾಗಿ ಹೆರಿಗೆ ವೇಳೆ ಅಕಾಲಿಕ ಮರಣ ಸಂಭವಿಸಿದೆ. ಈ ಅಪರಾಧಕ್ಕೆ ಕಾರಣನಾದ ವ್ಯಕ್ತಿ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಆರೋಪಿಯು ಸಂತ್ರಸ್ತೆಯ ಕುಟುಂಬದೊಂದಿಗೆ ಉತ್ತಮ ಒಡನಾಟ ಹೊಂದಿದ್ದ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದ, ಅಂತಿಮವಾಗಿ ಆಕೆ ಗರ್ಭಿಣಿಯಾಗಿದ್ದಳು. ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿ ಪ್ರಾಣಬಿಟ್ಟಿದ್ದಾಳೆ. ಹೆರಿಯಾದ ಬಳಿಕ ಆರೋಗ್ಯ ಕ್ರಮೇಣವಾಗಿ ಕ್ಷೀಣಿಸುತ್ತಿತ್ತು.
ತೀವ್ರ ರಕ್ತಹೀನತೆ ಮತ್ತು ಉಸಿರಾಟದ ತೊಂದರೆಗಳಿಂದ ಬಳಲುತ್ತಿದ್ದ ಆಕೆಯ ಸ್ಥಿತಿ ಹದಗೆಟ್ಟಿತು, ಇದರಿಂದಾಗಿ ತಿರುಪತಿಯ ಆಸ್ಪತ್ರೆಗೆ ವರ್ಗಾಯಿಸಬೇಕಾಯಿತು. ವೈದ್ಯಕೀಯ ತಂಡದ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಅವರು ಭಾನುವಾರ ಕೊನೆಯುಸಿರೆಳೆದಿದ್ದಾಳೆ.