ಬಿಲ್ಕಿಸ್ ಬಾನು ಕೇಸ್ | ಖುಲಾಸೆಯಾಗಿದ್ದ 11 ಅಪರಾಧಿಗಳು ಮತ್ತೆ ಜೈಲಿಗೆ: ಸುಪ್ರೀಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಲ್ಕಿಸ್ ಬಾನು ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸರ್ಕಾರ ವಿನಾಯಿತಿ ಆದೇಶದಂತೆ 11 ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು.

ಈ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 12 ವರ್ಷಗಳ ಹಿಂದೆ ಗುಜರಾತ್ ಗಲಭೆಯಲ್ಲಿ ತನ್ನ ಮೇಲೆ ಅತ್ಯಾಚಾರ ಹಾಗೂ ಕಣ್ಣೆದುರೇ ಕುಟುಂಬ ಹಾಗೂ ಮಗುವನ್ನು ಕೊಂದ ಆರೋಪಿಗಳನ್ನು ಬಿಡುಗಡೆ ಮಾಡಿದ್ದನ್ನು ಬಾನೋ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಅರ್ಜಿ ಮಾನ್ಯವಾಗಿದೆ ಹಾಗೂ ಈ ಬಗ್ಗೆ ವಿಚಾರಣೆ ಮುಂದುವರಿಯಲಿದೆ. ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳುಹಿಸಿ ಎಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಉಜ್ವಲ್ ಭುಯಾನ್ ಆದೇಶ ನೀಡಿದ್ದಾರೆ.

ಗುಜರಾತ್ ಸರ್ಕಾರ ಅಪರಾಧಿಗಳನ್ನು ಬಿಡುಗಡೆ ಮಾಡುವ ಸಾಮರ್ಥ್ಯ ಹೊಂದಿಲ್ಲ, ಈ ನಿರ್ಧಾರ ಮಹಾರಾಷ್ಟ್ರ ಸರ್ಕಾರಕ್ಕೆ ಬಿಟ್ಟಿದ್ದು, ಸಾಮರ್ಥ್ಯದ ಕೊರತೆಯಿಂದ ಈ ಆದೇಶ ರದ್ದುಮಾಡಿರುವುದಾಗಿ ಸುಪ್ರೀಂ ಹೇಳಿದೆ.

ಎರಡು ವರ್ಷದ ಹಿಂದೆ ಅಪರಾಧಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ಬಿಡುಗಡೆ ವೇಳೆ ಅಪರಾಧಿಗಳಿಗೆ ಅದ್ಧೂರಿ ಸ್ವಾಗತ ಹಾಗೂ ಕಾರ್ಯಕ್ರಮ ನೆರವೇರಿಸಲಾಗಿತ್ತು. ಕೆಲ ಸಂಸದರು, ಶಾಸಕರು ಅಪರಾಧಿಗಳ ಜೊತೆ ಸ್ಟೇಜ್ ಹಂಚಿಕೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!