Friday, August 19, 2022

Latest Posts

11 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಚಾಲನೆ

ಹೊಸದಿಗಂತ ವರದಿ, ಬಾಗಲಕೋಟೆ:

ಮುಧೋಳ್ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 11.02 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಅಪಾರವಾಗಿ ಶ್ರಮಿಸಲಾಗುತ್ತಿದ್ದು,
ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ ಎಂದರು.
ಇಂದು ರಸ್ತೆ ನಿರ್ಮಾಣ, ಕುರಿಯುವ ನೀರು ಪೂರೈಕೆ, ಶಾಲಾ ಕೊಠಡಿ ನಿರ್ಮಾಣ, ಶೌಚಾಲಯ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯ ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಈ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು. ಈ‌ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಡಿಸಿಎಂ ಮನವಿ ಮಾಡಿದರು.
ಸಂದರ್ಭದಲ್ಲಿ ವಿವಿಧ ಮುಖಂಡರು, ಪದಾಧಿಕಾರಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!