11 ಕೋಟಿ ರೂ. ಬಾಕಿ ಪಾವತಿಸುವಂತೆ ಸಿಪಿಐಗೆ ಐಟಿ ಇಲಾಖೆ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಅನ್ನು ಬಳಸಿದ್ದಕ್ಕಾಗಿ 11 ಕೋಟಿ ರೂ.ಗಳ ಬಾಕಿ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ನೊಟೀಸ್ ನೀಡಿದೆ.

ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಹಳೆಯ ಪ್ಯಾನ್ ಕಾರ್ಡ್ ಬಳಸಿದ್ದಕ್ಕಾಗಿ ಪಾವತಿಸಬೇಕಾದ ತೆರಿಗೆ ಬಾಕಿ, ಬಡ್ಡಿ ಮತ್ತು ದಂಡಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಸಿಪಿಐಗೆ ಈ ನೊಟೀಸ್ ಜಾರಿ ಮಾಡಿದೆ ಮೂಲಗಳು ತಿಳಿಸಿವೆ.

ತೆರಿಗೆ ಅಧಿಕಾರಿಗಳು ನೊಟೀಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಲು ಎಡಪಕ್ಷವು ತನ್ನ ವಕೀಲರನ್ನು ಸಂಪರ್ಕಿಸುತ್ತಿದೆ ಎಂದು ತಿಳಿದುಬಂದಿದೆ.

ಆದಾಯ ತೆರಿಗೆ ಇಲಾಖೆಯು ನೊಟೀಸ್ ಜಾರಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ನೆರವು ಪಡೆಯಲು ನೋಡುತ್ತಿದ್ದೇವೆ ಮತ್ತು ಅದಕ್ಕಾಗಿ ನಮ್ಮ ವಕೀಲರನ್ನು ಸಂಪರ್ಕಿಸುತ್ತಿದ್ದೇವೆ ಎಂದು ಹಿರಿಯ ಸಿಪಿಐ ನಾಯಕರೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್‌ನಲ್ಲಿನ ವ್ಯತ್ಯಾಸಗಳಿಗಾಗಿ ಆದಾಯ ತೆರಿಗೆ ಇಲಾಖೆಯು 1,700 ಕೋಟಿ ರೂಪಾಯಿ ಪಾವತಿಸುವಂತೆ ಹೊಸ ನೋಟಿಸ್ ಅನ್ನು ನೀಡಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!