ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ 11 ಇಂದಿರಾ ಕ್ಯಾಂಟೀನ್ಗಳನ್ನು ಮುಚ್ಚಿರುವ ವರದಿಗಳ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿಷಯದ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪ್ರಕಟಿಸಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಬಡವರ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ತೆರೆದರು ಎಂದು ಹೆಮ್ಮೆ ಪಡುತ್ತಿದ್ದ ಕಾಂಗ್ರೆಸಿಗರು ನಮ್ಮ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಯಾಂಟೀನ್ ಮುಚ್ಚುತ್ತೇವೆ ಎಂದು ಅಪಪ್ರಚಾರ ಮಾಡಿದರು. ಆದರೆ ಈಗ ಏನಾಗುತ್ತಿದೆ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.
ನಿಮ್ಮ ಸರ್ಕಾರದ ಕ್ರಮಗಳನ್ನು ನೋಡಿದರೆ ಕರ್ನಾಟಕದ ಚಲನಶೀಲತೆಗೆ ತುಕ್ಕು ಹಿಡಿಸಲು ಹೊರಟಂತಿದೆ. ಸರಕಾರದ ಆರ್ಥಿಕ ಸ್ಥಿತಿ ನೋಡಿದರೆ ಇಂದಿರಾ ಕ್ಯಾಂಟೀನ್ಗೆ ಆಗುತ್ತಿರುವ ಗತಿಯೇ ಬಡವರ ಇತರ ಯೋಜನೆಗಳಿಗೂ ಆಗುವುದು ನಿಶ್ಚಿತ ಎಂದು ಕಿಡಿಕಾರಿದ್ದಾರೆ.