ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 11 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಇಂದು ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ 11ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮಧ್ಯಪ್ರದೇಶ ರಾಜ್ಯದ ಜಮುನಾ ಬೆತುಲ್ ಜಿಲ್ಲೆಯ ಜಲ್ಲಾರ್ ಪೊಲೀಸ್ ಠಾಣೆ ಬಳಿ ನಡೆದಿದೆ. ಬಸ್ ಮತ್ತು ಟವೇರಾ ವಾಹನ ನಡುವೆ ಅಪಘಾತವಾಗಿ ಈ ದುರ್ಘಟನೆ ನಡೆದಿದೆ. ಈ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತರಲ್ಲಿ ಐವರು ಪುರುಷರು, ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಸೇರಿದ್ದಾರೆ.

ಟವೇರಾ ಕಾರಿನಲ್ಲಿದ್ದವರೆಲ್ಲ ಮಹಾರಾಷ್ಟ್ರದ ಅಮರಾವತಿಯಿಂದ ತಮ್ಮ ಮನೆಗೆ ಹೋಗುತ್ತಿದ್ದರು. ಟವೇರಾ ಚಾಲಕ ಮಾರ್ಗಮಧ್ಯೆ ನಿದ್ದೆ ಮಂಪರಿನಲ್ಲಿದ್ದು ಮುಂದೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಬೇತುಲ್ ಎಸ್ಪಿ ಶಿಮ್ಲಾ ಪ್ರಸಾದ್ ತಿಳಿಸಿದ್ದಾರೆ. ಅಪಘಾತದಲ್ಲಿ ಕಾರಿಗೆ ಭಾರೀ ಹಾನಿಯಾಗಿದೆ. ಪ್ರಾಣ ಕಳೆದುಕೊಂಡವರು ರಾಜ್ಯದವರೇ ಅಥವಾ ಬೇರೆ ಪ್ರದೇಶಕ್ಕೆ ಸೇರಿದವರೇ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!