Tuesday, March 21, 2023

Latest Posts

ಟ್ರಕ್ ಮತ್ತು ಪಿಕಪ್ ವಾಹನಗಳ ನಡುವೆ ಡಿಕ್ಕಿ: 11ಮಂದಿ ಸಾವು, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಿಕಪ್ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಹನ್ನೊಂದು ಜನರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಲೋಡಾ ಬಜಾರ್ ಜಿಲ್ಲೆಯಲ್ಲಿ  ನಡೆದಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಭಟಪರ ಸಿದ್ಧಾರ್ಥ ಬಘೇಲ್ ಶುಕ್ರವಾರ ತಿಳಿಸಿದ್ದಾರೆ.

ಪಿಕಪ್ ವಾಹನವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಅರ್ಜುನಿ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ, ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಅವರಲ್ಲಿ ಕೆಲವರನ್ನು ಉತ್ತಮ ವೈದ್ಯಕೀಯ ಸಹಾಯಕ್ಕಾಗಿ ರಾಯ್‌ಪುರಕ್ಕೆ ಸಾಗಿಸಲಾಗಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇದೇ ರೀತಿ ಫೆಬ್ರವರಿ 9 ರಂದು ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಆಟೋ ರಿಕ್ಷಾ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿ, ಮಗು ಮತ್ತು ಆಟೋ ಚಾಲಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!