ಮದುವೆ ಮುಗಿಸಿ ವಾಪಾಸ್ಸಾಗುತ್ತಿದ್ದ ವೇಳೆ ಕಂದಕಕ್ಕೆ ಉರುಳಿದ ವಾಹನ: 11 ಜನರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮದುವೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ವಾಹನ ಕಂದಕಕ್ಕೆ ಬಿದ್ದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉತ್ತರಾಖಂಡದ ಚಂಪಾವತ್‌ ಜಿಲ್ಲೆಯಲ್ಲಿ ಸುಖಿಧಾಂಗ್‌-ದಂಡಮಿನಾರ್‌ ರಸ್ತೆಯಲ್ಲಿ ವಾಹನ ಆಯತಪ್ಪಿ ಕಂದಕಕ್ಕೆ ಉರುಳಿದೆ. ಮೃತರನ್ನು ಚಂಪಾವತ್‌ ಜಿಲ್ಲೆಯ ತನಕ್‌ ಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಘಟನೆಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!