ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ಬಾಂಬ್ ಸ್ಫೋಟ ಸಂಭವಿಸಿದ ಪರಿಣಾಮ 11 ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರಂತ ಘಟನೆ ಪಾಕಿಸ್ತಾನದ ಉತ್ತರ ವಜಿರಿಸ್ತಾನದ ಗುಲ್ಮಿರ್ ಕೋಟ್ ಪ್ರದೇಶದಲ್ಲಿ ನಡೆದಿದೆ.
ಪಾಕ್ ಮಾಧ್ಯಮಗಳ ಪ್ರಕಾರ, ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನವನ್ನು ಭಯೋತ್ಪಾದಕರು ಸ್ಫೋಟಿಸಿದ್ದಾರೆ ಎಂದು ಡೆಪ್ಯುಟಿ ಕಮಿಷನರ್ ರೆಹಾನ್ ಗುಲ್ ಖಟ್ಟಕ್ ಮಾಹಿತಿ ನೀಡಿದ್ದಾರೆ.
ರಕ್ಷಣಾ ತಂಡಗಳು ಮತ್ತು ಪೊಲೀಸ್ ತುಕಡಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.