ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಮಧ್ಯೆ ಗಾಯಕ್ವಾಡ್ ಅವರ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರದಲ್ಲಿ ಬಿಜೆಪಿಯೂ ಮೈತ್ರಿಪಕ್ಷವಾಗಿದೆ.
ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದಾಗ ಭಾರತದಲ್ಲಿನ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಲು ಬಯಸುವುದಾಗಿ ಹೇಳಿದ್ದರು. ಇದು ಕಾಂಗ್ರೆಸ್‌ನ ನಿಜವಾದ ಮುಖವನ್ನು ಅನಾವರಣಗೊಳಿಸಿದೆ ಎಂದು ಗಾಯಕ್ವಾಡ್ ವಿಚಿತ್ರ ರೀತಿಯ ಬಹುಮಾನ ಘೋಷಿಸುವ ಮೊದಲು ಸುದ್ದಿಗಾರರಿಗೆ ತಿಳಿಸಿದರು.