ಕಾಲ್ತುಳಿತದಲ್ಲಿ 11 ಜನ ಮೃತಪಟ್ಟು 56 ಮಂದಿಗೆ ಗಾಯ, ಹೊಸ SOP ಜಾರಿ: ಡಾ.ಜಿ.ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 56 ಜನ ಗಾಯಗೊಂಡಿದ್ದಾರೆ ಎಂದು ಇಂದು ಗುರುವಾರ ಗೃಹ ಸಚಿವ ಡಾ ಜಿ ಪರಮೇಶ್ವರ್ ದೃಢಪಡಿಸಿದ್ದಾರೆ.

ಗಾಯಗೊಂಡವರಲ್ಲಿ 46 ಮಂದಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. 10 ಮಂದಿ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಯಾರಿಗೂ ಗಂಭೀರ ಸ್ವರೂಪದಲ್ಲಿಲ್ಲ ಎಂದು ನಮ್ಮ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಾ ಪರಮೇಶ್ವರ್, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಸರ್ಕಾರ ಯಾವುದೇ ಸಭೆ ಸಮಾರಂಭಗಳನ್ನು ಮಾಡುವಾಗ, ವಿಜಯೋತ್ಸವವನ್ನು ಮಾಡುವ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯ ಮಾರ್ಗದರ್ಶನದಲ್ಲಿ ಮಾಡಬೇಕೆಂದು ಸೂಚನೆಗಳನ್ನು ನೀಡುತ್ತೇವೆ. ಹೊಸ ಶಿಷ್ಟಾಚಾರಗಳನ್ನು ಜಾರಿಗೆ ತರಲಾಗುವುದು ಎಂದರು.

ಬೆಂಗಳೂರಿನಲ್ಲಿ ನಡೆದ ಘಟನೆ ರೀತಿ ರಾಜ್ಯದ ಕ್ರಿಕೆಟ್ ಇತಿಹಾಸದಲ್ಲಿಯೇ ಆಗಿರಲಿಲ್ಲ. ಮೃತಪಟ್ಟ ಯುವಕ-ಯುವತಿಯರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!