ಕಾಲ್ತುಳಿತದಲ್ಲಿ 11 ಜನ ಸಾವು ಪ್ರಕರಣ: ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಬೆಂಗಳೂರು ಕೊಟ್ಟಿಗೆಪಾಳ್ಯದ ನಿವಾಸಿ ಗಿರೀಶ್‌ ಕುಮಾರ್‌ ಎಂಬುವವರು ಸುದೀರ್ಘ ಪತ್ರದೊಂದಿಗೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಐಪಿಎಲ್‌-ಆರ್‌ಸಿಬಿ ವಿಜಯೋತ್ಸವಕ್ಕೆ ಸಾರ್ವಜನಿಕರನ್ನು ಸ್ವತಃ ಮುಖ್ಯಮಂತ್ರಿಗಳೇ ಆಹ್ವಾನಿಸಿದ್ದಾರೆ. ಸರಿಯಾದ ವ್ಯವಸ್ಥೆ ಮಾಡದೇ, ನಿರ್ಲಕ್ಷ್ಯ ವಹಿಸಿದ ಕಾರಣ ಅಮಾಯಕರ ಸಾವು-ನೋವಾಗಿದೆ. ಈ ಹಿನ್ನೆಲೆ ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!