ಹೊಸದಿಗಂತ ವರದಿ ಕಲಬುರಗಿ:
ಬೆಳ್ಳಂ ಬೆಳಗ್ಗೆಯೇ ನಗರದಲ್ಲಿ ಹೋಟೆಲ್ನ ಕಿಚನ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಹನ್ನೊಂದಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ನಗರದ ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಘಟನೆ ನಡೆದಿದ್ದು, ಹೋಟೆಲ್ ನಲ್ಲಿದ್ದ ಹನ್ನೊಂದು ಕಾರ್ಮಿಕರಿಗೆ ಗಾಯಗಳಾಗಿದ್ದು, ಅದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಇನ್ನೂ, ಘಟನೆಯಲ್ಲಿ ರಾಕೇಶ್, ಶಂಕರ್, ಗುರುಮೂರ್ತಿ, ಪ್ರಶಾಂತ್, ಸತ್ಯವಾನ ಶರ್ಮ್, ಅಪ್ಪಾರಾಯ, ಮಲ್ಲಿನಾಥ್, ವಿಠಲ್, ಮಹೇಶ್, ಲಕ್ಷ್ಮಣ ಸೇರಿ 10 ಜನರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ವಿಷಯ ತಿಳಿದ ತಕ್ಷಣವೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.