BBMP ಅಧಿಕಾರಿಗಳ ವಿರುದ್ಧ 110 ಕೋಟಿ ಭ್ರಷ್ಟಾಚಾರ ಆರೋಪ: ಕಾಮಗಾರಿ ನಡೆಸದೇ ಹಣ ಬಿಡಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಬಿಎಂಪಿ ಅಧಿಕಾರಿಗಳು ಕಾಮಗಾರಿ ನಡೆಸದೆ ₹110 ಕೋಟಿ ಬಿಡುಗಡೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು. ಈ ಸಂಬಂಧ ದೂರುದಾರರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ₹110 ಕೋಟಿ ಬಿಡುಗಡೆ ಮಾಡಿದರೂ ಪಾಲಿಕೆಯ ನೀರು ಕಾಲುವೆ ಇಲಾಖೆ ವತಿಯಿಂದ ಕಾಮಗಾರಿ ನಡೆದಿಲ್ಲ. ಈ ಹಣವನ್ನು ಯೋಗಾ ಎಂಬ ಕಂಪನಿಗೆ ಇನ್‌ವಾಯ್ಸ್‌ಗಳ ರೂಪದಲ್ಲಿ ಪಾವತಿಸಲಾಗುತ್ತಿದೆ. ಆದರೆ ಕಾಮಗಾರಿ ಮಾಡದೆ ಹಣ ಖರ್ಚು ಮಾಡುವುದು ಕಾನೂನು ಬಾಹಿರ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತರು.

ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆಯಲಾಗಿದೆ. ಡಿಸಿಎಂ ಶಿವಕುಮಾರ್ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!