ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ನನ್ನು ಹತ್ಯೆ ಮಾಡಿದ್ರೆ 1,11,11,111 ನಗದು ಬಹುಮಾನವನ್ನು ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನೆ ಘೋಷಣೆ ಮಾಡಿದೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರಿಂದ ಹತ್ಯೆಗೀಡಾದ ಪ್ರಮುಖ ರಜಪೂತ್ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಗೆ ಸೇಡು ತೀರಿಸಿಕೊಳ್ಳಲು ಕ್ಷತ್ರಿಯ ಕರ್ಣಿ ಸೇನೆಯ ನಾಯಕ ರಾಜ್ ಶೇಖಾವತ್ ಈ ಬಹುಮಾನವನ್ನು ಘೋಷಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹಂಚಿಕೊಂಡಿರುವ ರಾಜ್ ಶೇಖಾವತ್, ಜೈಲಿನಲ್ಲಿರುವ ದರೋಡೆಕೋರನನ್ನು ಕೊಂದ ಯಾವುದೇ ಪೊಲೀಸ್ ಅಧಿಕಾರಿಗೆ ಬಹುಮಾನವನ್ನು ನೀಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.