ಕೇರಳದಲ್ಲಿ ಇಂದು 115 ಮಂದಿಗೆ ಕೊರೋನಾ ಪಾಸಿಟಿವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣದಲ್ಲಿ ಬಹುಪಾಲು ಕೇರಳದಲ್ಲಿ ಪತ್ತೆಯಾಗಿದ್ದು, ಇದೀಗ ಇಂದು ಒಂದೇ ದಿನ ಕೋವಿಡ್ ಪ್ರಕರಣ ದಾಖಲಾಗಿದೆ.
ಕೇರಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1749ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಂದು ಒಟ್ಟು 142 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಪೈಕಿ 115 ಕೇರಳದಲ್ಲೇ ಪತ್ತೆಯಾಗಿದೆ.

ಕೇರಳದಲ್ಲಿ ದಿಢೀರ್ ಕೋವಿಡ್ ಏರಿಕೆಯಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲಾ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕಕ್ಕೆ ಮರಳುತ್ತಿರುವ ಅಯ್ಯಪ್ಪ ಭಕ್ತರ ಮೇಲೆ ನಿಗಾವಹಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕೋವಿಡ್ ತಪಾಸಣೆ, ಲಕ್ಷಣ ಕಂಡುಬಂದವರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಸೂಚನೆ ನೀಡಿದೆ. ಎಲ್ಲಾ ಜಿಲ್ಲಾಸ್ಪತ್ರೆಗಳು ಸನ್ನದ್ಧವಾಗಿರುವಂತೆ ಎಚ್ಚರಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ.

ಭಾರತದಲ್ಲಿ ಕೋವಿಡ್ ಏರಿಕೆಯಾಗುತ್ತಿದ್ದರೆ, ಸಿಂಗಾಪುರದಲ್ಲಿ ಕೋವಿಡ್ ಗಣನೀಯವಾಗಿ ಏರಿಕೆಯಾಗಿದೆ. ಒಂದು ವಾರದಲ್ಲಿ 56,000 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಹೀಗಾಗಿ ಸಿಂಗಾಪುರದಲ್ಲಿ ಮತ್ತೆ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!