ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಲ್ಲಿರುವ ಭಾರತೀಯ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭವಾಗಿದೆ. 119 ಮಂದಿ ಅಕ್ರಮ ವಲಸಿಗರನ್ನು ಹೊತ್ತಿರುವ ಅಮೆರಿಕದ ವಿಮಾನ ಇಂದು ಪಂಜಾಬ್‌ನ ಅಮೃತಸರಕ್ಕೆ ಬಂದಿಳಿಯಲಿದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದಲ್ಲಿರುವಾಗಲೇ ಗಡಿಪಾರು ಪ್ರಕ್ರಿಯೆಯನ್ನು ಮುಂದುವರಿಸಿದೆ. ಇತ್ತೀಚೆಗಷ್ಟೇ 104 ಮಂದಿ ಭಾರತೀಯ ಅಕ್ರಮ ವಲಸಿಗರನ್ನು ಅಮೆರಿಕದಿಂದ ಭಾರತಕ್ಕೆ ಕಳುಹಿಸಲಾಗಿತ್ತು. ಗಡೀಪಾರು ಪ್ರಕ್ರಿಯೆ ನಡೆಯುತ್ತಿದ್ದು ಫೆ.16ರಂದು 3ನೇ ತಂಡ ಭಾರತಕ್ಕೆ ಬಂದಿಳಿಯುವ ಸಾಧ್ಯತೆಗಳಿವೆ.