ಹೊಸದಿಗಂತ ವರದಿ,ಮಡಿಕೇರಿ:
ಬುಧವಾರ 119 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
ಮಡಿಕೇರಿ ತಾಲೂಕಿನಲ್ಲಿ 28, ಸೋಮವಾರಪೇಟೆ ತಾಲೂಕಿನಲ್ಲಿ 56 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 35 ಹೊಸ ಪ್ರಕರಣಗಳು ದೃಢಪಟ್ಟಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಡು ಸಂಖ್ಯೆ 46,808ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 313ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 44740 ಮಂದಿ ಸೋಂಕಿನಿಂದ ಮುಕ್ತರಾಗಿದ್ದಾರೆ. ಅಲ್ಲದೆ 443 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 1625 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 171 ಹಾಗೂ ಪಾಸಿಟಿವಿಟಿ ದರ ಶೇ.5.04ರಷ್ಟಿರುವುದಾಗಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.