ಹೊಸದಿಗಂತ ವರದಿ ಧಾರವಾಡ:
ಇಲ್ಲಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಹಯೋಗದಲ್ಲಿ ನಗರದ ಲಿಂಗಾಯತ ಭವನದಲ್ಲಿ ಶುಕ್ರವಾರ ನಡೆದ ಮೂರು ದಿನದ ಕರ್ನಾಟಕ ರಾಮಕೃಷ್ಣ ವಿವೇಕಾನಂದ ಭಾವಪ್ರಚಾರ ಪರಿಷತ್ತಿನ 11ನೇ ವಾರ್ಷಿಕ ಸಮ್ಮೇಳನ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಉದ್ಘಾಟಿಸಿದರು.
ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ಮರಣ ಸಂಚಿಕೆ ಹಾಗೂ ಹುಬ್ಬಳ್ಳಿ ಮೂರು ಸಾವಿರ ಮಠದ ಡಾ.ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಪುಸಕ್ತ ಬಿಡುಗಡೆ ಮಾಡಿದರು. ಗದುಗಿನ ಸ್ವಾಮಿ ನಿರ್ಭಯಾನಂದ ಸರಸ್ವತಿ ಆಶಯ ನುಡಿದರು.
ವೇದಿಕೆಯಲ್ಲಿ ಸ್ವಾಮಿ ಅನುಪಮಾನಂದ ಮಹಾರಾಜ್, ಸ್ವಾಮಿ ತ್ಯಾಗೀಶ್ವರಾನಂದ ಮಹಾರಾಜ್, ಸ್ವಾಮಿ ಬೋಧಸ್ವರೂಪಾನಂದ ಮಹಾರಾಜ್, ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಡಿ.ಆರ್. ಪಾಟೀಲ, ಮೇಯರ್ ಜ್ಯೋತಿ ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಇದ್ದರು.
ರಾಮಕೃಷ್ಣ ವಿವೇಕಾನಂದ ಆಶ್ರಮದ ಪೂಜ್ಯರಿಂದ ವೇದಘೋಷ ಮೊಳಗಿತು. ಸ್ವಾಮಿ ವಿಜಯಾನಂದ ಸರಸ್ವತಿ ಸ್ವಾಗತಿಸಿದರು. ಸ್ವಾಮಿ ಪ್ರಕಾಶನಂದ ಮಹಾರಾಜ್ ನಿರೂಪಿಸಿದರು. ಸ್ವಾಮಿ ಶಾರದೇಶಾನಂದ ಮಹಾರಾಹ್ ವಂದಿಸಿದರು.

