ಬೆಂಗಳೂರಿನ ಕಟ್ಟಡವೊಂದರ ನೆಲಮಹಡಿಯಲ್ಲಿದ್ದ 12 ಬೈಕ್‌ಗಳು ಬೆಂಕಿಗಾಹುತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನೆಲಮಹಡಿಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ಎರಡು ವಿದ್ಯುತ್ ಚಾಲಿತ ವಾಹನಗಳು ಸೇರಿದಂತೆ 12 ಬೈಕ್ ಗಳು ಬೆಂಕಿಯಿಂದ ಸುಟ್ಟು ಭಸ್ಮವಾಗಿರುವ ಘಟನೆ ಭಾನುವಾರ ನಡೆದಿದೆ.

ನಗರದ ಉಲ್ಲಾಳು ಬಳಿ ಭಾನುವಾರ ಮುಂಜಾನೆ ಈ ಅವಘಡ ನಡೆದಿದ್ದು, ಡಾಮಿನೋಸ್ ಪಿಜ್ಜಾ ಡೆಲಿವರಿ ಮಾಡಲು ಬಳಸುತ್ತಿದ್ದ ಬೈಕ್ ಗಳು ಬೆಂಕಿಗಾಹುತಿಯಾಗಿವೆ.

ಪಿಜ್ಜಾವನ್ನು ಮನೆ ಮನೆಗೆ ತಲುಪಿಸಲು ಡೆಲಿವರಿ ಬಾಯ್ ಗಳು ಈ ಬೈಕ್ ಗಳನ್ನು ಬಳಸುತ್ತಿದ್ದರು. ಕೆಲಸ ಮುಗಿಸಿದ ಬಳಿಕ ನೆಲಮಹಡಿಯಲ್ಲಿ ನಿಲ್ಲಿಸಲಾಗಿತ್ತು. ರಾತ್ರಿ ವೇಳೆ ಅವುಗಳಿಗೆ ಬೆಂಕಿ ಬಿದ್ದಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ. ಅಲ್ಲದೆ, ಘಟನೆಯಲ್ಲಿ ಜನರೇಟರ್‌ಗೆ ಹಾನಿಯಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!