ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಂಟೈನರ್‌ಗೆ ಮಿನಿ ಬಸ್ ಡಿಕ್ಕಿಯಾದ ಪರಿಣಾಮ 12 ಮಂದಿ ಸಾವನ್ನಪ್ಪಿದ್ದು, 23 ಜನ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
35 ಭಕ್ತರನ್ನು ಹೊತ್ತ ಮಿನಿ ಬಸ್ ಅತೀ ವೇಗವಾಗಿ ಚಲಿಸಿದ ಪರಿಣಾಮ ನಿಂತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಅದರಿಂದಾಗಿ ಬಸ್‌ನಲ್ಲಿದ್ದ 12 ಮಂದಿ ಮೃತಪಟ್ಟಿದ್ದು, 23 ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯ ವೈಜಾಪುರ ಪ್ರದೇಶದಲ್ಲಿ ಶನಿವಾರ ಮಧ್ಯರಾತ್ರಿ 12.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಮೃತರ ಪೈಕಿ ಐವರು ಪುರುಷರು, ಆರು ಮಹಿಳೆಯರು ಮತ್ತು ಓರ್ವ ಬಾಲಕಿ ಸೇರಿದ್ದಾರೆ. 23 ಮಂದಿ ಗಾಯಗೊಂಡಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಕ್ತರೆಲ್ಲರು ನಾಸಿಕ್ ಜಿಲ್ಲೆಯ ಪಥರ್ಡಿ ಮತ್ತು ಇಂದಿರಾನಗರ ನಿವಾಸಿಗಳು ಎಂದು ತಿಳಿದುಬಂದಿದೆ.