Saturday, August 13, 2022

Latest Posts

ನದಿಗೆ ಉರುಳಿದ ಬಸ್‌: 12 ಜೀವಗಳು ಬಲಿ, ಗಂಭೀರ ಸ್ಥಿತಿಯಲ್ಲಿ 15 ಮಂದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುಮಾರು 40 ಮಂದಿ ಪ್ರಯಾಣಿಕರಿದ್ದ ಬಸ್ ನರ್ಮದಾ ನದಿಗೆ ಬಿದ್ದಿರುವ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಸ್‌ನಲ್ಲಿದ್ದ 12 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚ ಜನ ಗಾಯಗೊಂಡಿದ್ದಾರೆ. ಇನ್ನು ಕೆಲ ಮಂದಿ ಕಣ್ಮರೆಯಾಗಿದ್ದು ಅವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಮಹಾರಾಷ್ಟ್ರದ ಇಂದೋರ್‌ನಿಂದ ಪುಣೆಗೆ ಬಸ್ ತೆರಳುತ್ತಿದ್ದಾಗ ಧಾರ್ ಜಿಲ್ಲೆಯ ಖಲ್ಘಾಟ್‌ನಲ್ಲಿ ಈ ಘಟನೆ ನಡೆದಿದೆ. ಸೇತುವೆಯ ಮೇಲೆ ನಿಯಂತ್ರಣ ತಪ್ಪಿ ಬಸ್ ನರ್ಮದಾ ನದಿಗೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್ ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಪಘಾತದಲ್ಲಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಪಘಾತದ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ನೆರವಾಗುವುದಾಗಿ ತಿಳಿಸಿದರು. ರಕ್ಷಣಾ ಕಾರ್ಯಾಛರಣೆ ಭರದಿಂದ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss