ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ರಷ್ಯಾ ಪರವಾಗಿ ಹೋರಾಡುತ್ತಿರುವ ಒಟ್ಟು 126 ಭಾರತೀಯರಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.
ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ (Randhir Jaiswal) ಅವರಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಇಂದಿನವರೆಗೆ ರಷ್ಯಾ ಸೇನೆಯಲ್ಲಿ ಒಟ್ಟು 126 ಮಂದಿ ಭಾರತೀಯರು ಸೇವೆ ಸಲ್ಲಿಸುತ್ತಿದ್ದರು. ಈ ಪೈಕಿ 12 ಮಂದಿ ಸಾವನ್ನಪ್ಪಿದ್ದಾರೆ. 96 ಮಂದಿ ರಷ್ಯಾದ ಸಶಸ್ತ್ರ ಪಡೆಗಳಿಂದ ಬಿಡುಗಡೆಯಾಗಿದ್ದು, ಭಾರತಕ್ಕೆ ಮರಳಿದ್ದಾರೆ ಎಂದು ಎಂದು ತಿಳಿಸಿದ್ದಾರೆ.
ಅಲ್ಲದೇ 18 ಮಂದಿ ರಷ್ಯಾ ಸೇನೆಯಲ್ಲಿ ಉಳಿದುಕೊಂಡಿದ್ದು, ಈ ಪೈಕಿ 16 ಮಂದಿ ಎಲ್ಲಿದ್ದಾರೆ ಅನ್ನೋ ಮಾಹಿತಿ ತಿಳಿದಿಲ್ಲ. ರಷ್ಯಾದ ಸೇನಾಧಿಕಾರಿಗಳು ಅವರು ಕಾಣೆಯಾಗಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ಉಳಿದ ಭಾರತೀಯರನ್ನ ಶೀಘ್ರವೇ ಭಾರತಕ್ಕೆ ಕಳುಹಿಸುವಂತೆ ಹೇಳಿದ್ದೇವೆ ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.