ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಬಸ್ಸೊಂದು ಅಪಘಾತಕ್ಕೀಡಾಗಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಿಕ್ಕಿಂ ನ ಗ್ಯಾಂಗ್ಟಾಕ್ ಜಿಲ್ಲೆಯ ಮಖಾದ ಸಿಂಗ್ಬೆಲ್ನಲ್ಲಿ ಇಂದು ನಡೆದಿದೆ.
23 ವಿದ್ಯಾರ್ಥಿಗಳು, ಇಬ್ಬರು ಸಿಬ್ಬಂದಿ ಮತ್ತು ಚಾಲಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಗೆ ಅಪಘಾತವಾಗಿದ್ದು, ಘಟನೆಯಲ್ಲಿ 12 ಮಕ್ಕಳು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಗ್ಯಾಂಗ್ಟಾಕ್ನ ಎಸ್ಟಿಎನ್ಎಂ ಆಸ್ಪತ್ರೆ ಮತ್ತು ಸೆಂಟ್ರಲ್ ರೆಫರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಈವರೆಗೂ ಯಾವುದೇ ಪ್ರಾಣಹಾನಿಯ ಬಗ್ಗೆ ವರದಿಯಾಗಿಲ್ಲ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.