ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಗಾಜಾದಲ್ಲಿರುವ ಇಂಡೋನೇಷ್ಯಾ ಆಸ್ಪತ್ರೆ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿದ್ದು, 12 ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್‌ನ ಆರೋಗ್ಯ ಸಚಿವಾಲಯ ಹೇಳಿದೆ.
ಇಂಡೋನೇಷ್ಯಾ ಆಸ್ಪತ್ರೆ ಹಾಗೂ ಇತರ ಕಟ್ಟಡಗಳ ಮೇಲೆ ಇಸ್ರೇಲ್ ಸೇನೆಯು ದಾಳಿ ಮಾಡಿದೆ ಎಂದು ಸಚಿವಾಲಯ ತಿಳಿಸಿದೆ.
ದಾಳಿಯಿಂದಾಗಿ 12 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಆಸ್ಪತ್ರೆಯಿಂದ 100ಕ್ಕೂ ಅಧಿಕ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಇನ್ನು 100 ಮಂದಿಯನ್ನು ಖಾನ್ ಯೂನಿಸ್‌ಗೆ ಸ್ಥಳಾಂತರಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ವಕ್ತಾರ ಅಶ್ರಫ್ ಅಲ್-ಖುದ್ರಾ ತಿಳಿಸಿದ್ದಾರೆ.
ಗಾಜಾದ ಮೇಲೆ ಇಸ್ರೇಲ್ ದಾಳಿ ನಿರಂತರವಾಗಿ ದಾಳಿ ನಡೆಸುತ್ತಿದ್ದು, ಈವರೆಗೂ 13,300ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ಖುದ್ರಾ ಮಾಹಿತಿ ನೀಡಿದ್ದಾರೆ.