ಉತ್ತರಾಖಂಡ ರಸ್ತೆ ಅಪಘಾತದಲ್ಲಿ 12 ಮಂದಿ ಸಾವು: ರಾಷ್ಟ್ರಪತಿ ಮುರ್ಮು, ಶಾ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟವರ ಕುಟುಂಬಸ್ಥರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸಂತಾಪ ಸೂಚಿಸಿದ್ದಾರೆ.

ಇಂದು ಬೆಳಿಗ್ಗೆ ಉತ್ತರಾಖಂಡದ ರಿಷಿಕೇಶ-ಬದರಿನಾಥ ಹೆದ್ದಾರಿಯಲ್ಲಿ ಟೆಂಪೊ ಟ್ರಾವೆಲರ್‌ ಕಮರಿಗೆ ಬಿದ್ದ ಪರಿಣಾಮ 12 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ರಾಷ್ಟ್ರಪತಿ ಅವರು, ‘ಉತ್ತರಾಖಂಡದ ರುದ್ರಪಯಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವು ಜನರು ಸಾವಿಗೀಡಾಗಿರುವ ಸುದ್ದಿ ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಮತ್ತು ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಂತಾಪ ಸೂಚಿಸಿದ್ದು, ‘ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತ ಸುದ್ದಿಯು ದುಃಖಕರವಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್‌ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!