ಬ್ರೆಜಿಲ್‌ನಲ್ಲಿ ಭೀಕರ ವಿಮಾನ ಅಪಘಾತ, 14 ಪ್ರಯಾಣಿಕರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘತಾಕ್ಕೀಡಾಗಿರುವ ಘಟನೆ ಬ್ರೆಜಿಲ್‌ನಲ್ಲಿ ಸಂಭವಿಸಿದೆ. ಉತ್ತರ ಅಮೆಜಾನ್ ರಾಜ್ಯದ ಬಾರ್ಸಿಲೋಸ್ ಪ್ರಾಂತ್ಯದಲ್ಲಿ ಶನಿವಾರ ನಡೆದ ಈ ದುರಂತದಲ್ಲಿ 14 ಜನರು ಸಾವನ್ನಪ್ಪಿದ್ದಾರೆ.

ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್‌ನಿಂದ ಸುಮಾರು 400 ಕಿಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸಿಲೋಸ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ವಿಮಾನವು ‘ಮಾನೌಸ್ ಏರೋಟ್ಯಾಕ್ಸಿ’ ಏರ್‌ಲೈನ್ಸ್‌ಗೆ ಸೇರಿದ್ದಾಗಿದೆ. ಮನೌಸ್ ಏರೋಟ್ಯಾಕ್ಸಿ ಏರ್‌ಲೈನ್ಸ್ ಈ ಅಪಘಾತ ಸಂಭವಿಸಿರುವುದರ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ಸಾವಿನ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ವಿಮಾನಯಾನ ಸಂಸ್ಥೆಗಳ ಅಧಿಕಾರಿಗಳು ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುವುದಾಗಿ ತಿಳಿಸಿದ್ದಾರೆ.

ಈ ಕುರಿತು ಅಮೆಜಾನ್ ಸ್ಟೇಟ್ ಗವರ್ನರ್ ವಿಲ್ಸನ್ ಲಿಮಾ ತ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರಿದ್ದಾರೆ. ಮೃತರಲ್ಲಿ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸೇರಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನ ಪ್ರಯಾಣಿಕರು ಯುಎಸ್ ಪ್ರಜೆಗಳು ಸೇರಿದ್ದಾರೆ ಎಂದು ಕೆಲವು ಬ್ರೆಜಿಲ್ ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!