ಮೈಸೂರಿನಲ್ಲಿ ಮತದಾನ ದಿನದಂದು ಕರ್ತವ್ಯಕ್ಕೆ 12 ಸಾವಿರ ಸಿಬ್ಬಂದಿ ನಿಯೋಜನೆ

ಹೊಸದಿಗಂತ ವರದಿ ಮೈಸೂರು :

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ದಿನದಂದು 12 ಸಾವಿರ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು

ಮೈಸೂರು ನಗರದ ನೂತನ ಜಿಲ್ಲಾಧಿಕಾರಿಯು ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ 2905 ಮತಗಟ್ಟೆಗಳಲ್ಲಿ ಸಮರ್ಪಕ ಮತದಾನ ಪ್ರಕ್ರಿಯೆಗೆ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ದುರ್ಬಲ ಮತದಾರರಿರುವ ಮತಗಟ್ಟೆಗಳಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಹಾಗೂ ವಿಕಲಚೇತನರು ಮತ್ತು 80 ವರ್ಷ ಪೂರೈಸಿರುವ ಮತದಾರರು ಮತದಾನ ಮಾಡಲು ಸಿದ್ಧತೆಗಳನ್ನು ಹಾಗೂ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ 97 ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ ಹಾಗೂ 1.44 ಕೋಟಿ ಹಣ ವಶಪಡಿಸಿಕೊಳ್ಳಲಾಗಿದೆ. ಚೆಕ್ ಪೋಸ್ಟ್ ಗಳಲ್ಲಿ ನಮ್ಮ ಸಿಬ್ಬಂದಿ ಬಿಸಿಲಿನಲ್ಲಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಚುನಾವಣಾ ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡುವಂತೆ ಸ್ವೀಪ್ ಸಮಿತಿಯ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಸುವಿಧಾ, ಸಿ-ವಿಜಿಲ್, ಎಂಸಿಸಿ,ಎಂಸಿಎಂಸಿ ಸೇರಿದಂತೆ ವಿವಿಧ ತಂಡಗಳ ಕಾರ್ಯಗಳ ಬಗೆಗೆ ಮಾತನಾಡಿದರು.

ಸಭೆಯಲ್ಲಿ ಸಾಮಾನ್ಯ ವೀಕ್ಷಕರು, ಪೂಲೀಸರು, ಪೋಲೀಸ್ ಆಯುಕ್ತರು ಸೇರಿದಂತೆ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!