ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲುಷಿತ ನೀರು ಕುಡಿದು 98 ಮಕ್ಕಳು ಮತ್ತು ಹಿರಿಯ ನಾಗರೀಕರು ಸೇರಿದಂತೆ 120ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಇಲೆಕ್ಟ್ರಾನಿಕ್ಸ್ ಸಿಟಿಯ ಹೊಸ ರಸ್ತೆಯಲ್ಲಿರುವ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಜೂನ್ 5 ರಂದು ಈ ಘಟನೆ ನಡೆದಿದ್ದು, ಕಳೆದೆರಡು ದಿನಗಳಲ್ಲಿ ಮೂವರು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದವರು ವಾಂತಿ ಭೇದಿ, ಜ್ವರದಿಂದ ಬಳಲುತ್ತಿದ್ದಾರೆ. ಶಾಲೆಗೆ ಹೋದ ಮಕ್ಕಳಿಗೆ ಶಾಲೆಯಲ್ಲೆ ಆನಾರೋಗ್ಯ ಕಾಣಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದಾರೆಂದು ತಿಳಿದುಬಂದಿದೆ.
ಆಸ್ಪತ್ರೆಗೆ ದಾಖಲಾಗಿರುವ ಮೂವರು ಮಕ್ಕಳಲ್ಲಿ ಒಬ್ಬರು ಮನೆಗೆ ತೆರಳಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಪಾಲಿಕೆಯು ನಿವಾಸಿಗಳಿಗೆ ಕುಡಿಯಲು ಮತ್ತು ಇತರ ಗೃಹಬಳಕೆ ಉದ್ದೇಶಗಳಿಗಾಗಿ ನೀರನ್ನು ಪೂರೈಕೆ ಮಾಡುತ್ತಿದೆ.