ಹೊಸದಿಗಂತ ಆನ್ ಲೈನ್ ಡೆಸ್ಕ್:
ಕರ್ನಾಟಕಕ್ಕೆ ಬರಬೇಕಾದ ಜಿ ಎಸ್ ಟಿ ಪಾಲಿನ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಮಾತುಕತೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಎಂದು ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ನಬಾರ್ಡ್ ವತಿಯಿಂದ ರಾಜ್ಯಕ್ಕೆ ಹೆಚ್ಚಿನ ನೆರವಿಗೆ ಮನವಿ ಮಾಡಿದ್ದೇನೆ. ಈ ಯೋಜನೆಯಿಂದ ರಾಜ್ಯದ ಸಣ್ಣ ಕೈಗಾರಿಕೆ, ಕೃಷಿಕರಿಗೆ ಅನುಕೂಲವಾಗಲಿದೆ. ನವೆಂಬರ್ ಮೊದಲ ವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸರ್ಕಾರ 12,000 ಕೋಟಿ ಹಣವನ್ನು ಕರ್ನಾಟಕಕ್ಕೆ ಸಾಲದ ರೂಪದಲ್ಲಿ ಒದಗಿಸಲಿದೆ ಎಂದು ತಿಳಿಸಿದರು.
GST ಪಾವತಿಯಲ್ಲಿ ಹಲವರು ಕಳ್ಳಮಾರ್ಗ ಕಂಡುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ವಿಧಾನಸಭೆಯಲ್ಲಿ ಎರಡನೇ ಪೂರಕ ಅಂದಾಜು ವೆಚ್ಚ ವಿಧೇಯಕದ ಮೇಲಿನ ಚರ್ಚೆಗೆ ಉತ್ತರಿಸುತ್ತಾ ಆರ್ಥಿಕ ನಿರ್ವಹಣೆ ಬಗ್ಗೆ ವಿವರಣೆ ನೀಡಿದರು. ಮುದ್ರಾಂಕ ಸುಂಕ, ಮೋಟಾರ್ ವಾಹನ ಸುಂಕ ಹಾಗೂ ಅಬಕಾರಿ ಸುಂಕ ಪಾವತಿಯಲ್ಲಿ ಆಗುತ್ತಿರುವ ಸೋರಿಕೆ ತಪ್ಪಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು.
ಕೊರೋನಾದಿಂದ ಐದು ವರ್ಷದಿಂದ ಸಾಧಿಸಿದ್ದ ಆರ್ಥಿಕ ಪ್ರಗತಿಯು ಮಂಕಾಗಿದೆ. ಆದಾಯ ಸೋರಿಕೆ ತಡೆಯ ಜೊತೆಗೆ ಆಡಳಿತಾತ್ಮಕ ವೆಚ್ಚಗಳನ್ನೂ ಕಡಿಮೆ ಮಾಡಿಕೊಳ್ಳುತ್ತಿದ್ದೇವೆ. ಜಿಎಸ್ಟಿ ಪರಿಹಾರವನ್ನು ಇನ್ನೂ 3 ವರ್ಷ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇವೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿದಾರಿಗೆ ತರಲು ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.