Thursday, August 11, 2022

Latest Posts

ಸಾಕ್ಷ್ಯಾಧಾರದ ಕೊರತೆ: ಸಿಮಿ ನಂಟು ಆರೋಪ ಎದುರಿಸುತ್ತಿದ್ದ 122 ಮಂದಿ ಖುಲಾಸೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಿಷೇಧಿತ ಸಿಮಿ ಸಂಘಟನೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದವರನ್ನು ನ್ಯಾಯಾಲಯ ಬಿಡುಗಡೆ ಮಾಡಿದೆ.
ಆರೋಪ ಎದುರಿಸುತ್ತಿದ್ದ 122 ಮಂದಿಯನ್ನು ಸಾಕ್ಷ್ಯಾಧಾರದ ಕೊರತೆ ಕಾರಣ ನೀಡಿ ಚೀಫ್ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಎ.ಎನ್.ದಾವೆ ಅವರು ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ.
2001 ರ ಡಿಸೆಂಬರ್‌ನಲ್ಲಿ ಸಿಮಿ ಸಂಘಟನೆಯ ಸಭೆಯಲ್ಲಿ ಭಾಗಿಯಾದ ಆರೋಪದಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಅನ್ವಯ ಆರೋಪಿಗಳನ್ನು ಬಂಧಿಸಲಾಗಿತ್ತು.
ಆರೋಪಿಗಳು ನಿಮಿ ಸದಸ್ಯರು ಮತ್ತು ಸಿಮಿ ಚಟುವಟಿಕೆಗಳಿಗಾಗಿ ಸಭೆ ಸೇರಿದ್ದರು ಎಂಬುದನ್ನು ಸಾಬೀತುಪಡಿಸಲು ವಿಫಲವಾಗಿರುವುದರಿಂದ ಸಾಕ್ಷ್ಯಾಧಾರದ ಕೊರತೆ ಪರಿಗಣಿಸಿ ಆರೋಪಿಯನ್ನು ಖುಲಾಸೆ ಗೊಳಿಸಲಾಗುತ್ತಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss