Monday, August 8, 2022

Latest Posts

ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 123 ಜನರಿಗೆ ಕೋವಿಡ್ ಸೋಂಕು ದೃಢ

ಹೊಸ ದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 123 ಮಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಈ ಪೈಕಿ 100 ಜನರಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ. ಅಲ್ಲದೆ ಜಿಲ್ಲೆಯಲ್ಲಿ 149 ಮಂದಿ ಗುಣಮುಖರಾದರು. ಇದೇ ವೇಳೆ ಕೇರಳದಲ್ಲಿ 3254 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಲ್ಲಿ 2979 ಮಂದಿಗೆ ಸಂಪರ್ಕದ ಮೂಲಕ ಸೋಂಕು ತಗಲಿದೆ. ರಾಜ್ಯದಲ್ಲಿ 4333 ಜನರು ಗುಣಮುಖರಾದರು.
ಕಲ್ಲಿಕೋಟೆ ಜಿಲ್ಲೆಯಲ್ಲಿ 378, ಕೋಟ್ಟಾಯಂ 363, ಮಲಪ್ಪುರಂ 354, ಎರ್ನಾಕುಳಂ 352, ಕೊಲ್ಲಂ 315, ಪತ್ತನಂತ್ತಿಟ್ಟ 266, ಆಲಪ್ಪುಳ 247, ತೃಶೂರು 201, ಕಣ್ಣೂರು 181, ತಿರುವನಂತಪುರ 160, ಕಾಸರಗೋಡು 123, ಇಡುಕ್ಕಿ 118, ವಯನಾಡು 99, ಪಾಲಕ್ಕಾಡು ಜಿಲ್ಲೆಯಲ್ಲಿ 88 ಜನರಿಗೆ ಕೊರೋನಾ ಸೋಂಕು ದೃಢಗೊಂಡಿದೆ. ಈ ಮಧ್ಯೆ ಕೋವಿಡ್ ವೈರಸ್ ಬಾಧಿಸಿ ಕೇರಳದಲ್ಲಿ ಭಾನುವಾರ 15 ಮಂದಿ ಸಾವಿಗೀಡಾದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss