COVID UPDATE| ಭಾರತದಲ್ಲಿ 12,591 ಹೊಸ ಪ್ರಕರಣ ಪತ್ತೆ, 40 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾತರದಲ್ಲಿ ಕಳೆದ 24 ಗಂಟೆಗಳಲ್ಲಿ 12,591 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಎಂಟು ತಿಂಗಳಲ್ಲಿ ದಿನವೊಂದರಲ್ಲಿ ಪತ್ತೆಯಾದ ಗರಿಷ್ಟ ಪ್ರಕರಣಗಳು ಇದಾಗಿದೆ.
ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 65,286 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್‌ ನಿಂದ 40 ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಕೇರಳದಲ್ಲಿ 11 ಮಂದಿ ನಿಧನರಾಗಿದ್ದಾರೆ. ಈ ವರೆಗೆ ಸಾವಿನ ಸಂಖ್ಯೆ 5,31,230ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇಲ್ಲಿಯವರೆಗೆ ಪತ್ತೆಯಾದ ಕೋವಿಡ್ ಪ್ರಕರಣಗಳ ಸಂಖ್ಯೆ 4.48 ಕೋಟಿ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!