ಕೊಡಗು ಜಿಲ್ಲೆಯಲ್ಲಿ 127 ಹೊಸ ಕೋವಿಡ್ ಪ್ರಕರಣ ಪತ್ತೆ: ಒಬ್ಬರ ಸಾವು

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 127 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಅಲ್ಲದೆ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 20,ಸೋಮವಾರಪೇಟೆ ತಾಲೂಕಿನಲ್ಲಿ 67 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 40 ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47106ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 268 ಮಂದಿ ಗುಮುಖರಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 45329 ಹಾಗೂ ಸತ್ತವರ ಸಂಖ್ಯೆ 444ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 1333 ಸಕ್ರಿಯ ಪ್ರಕರಣ, 144 ಕಂಟೈನ್ ಮೆಂಟ್ ವಲಯಗಳು ಹಾಗೂ ಪಾಸಿಟಿವಿಟಿ ದರ ಶೇ.6.4ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!