ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಹೆದ್ದಾರಿಗಳಲ್ಲಿ 13 ತುರ್ತು ಲ್ಯಾಂಡಿಂಗ್ ಸೌಲಭ್ಯ(ELFs)ಗಳು ಸಿದ್ಧವಾಗಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
ಮಿಲಿಟರಿ ಮೂಲಸೌಕರ್ಯವನ್ನು ಹೆಚ್ಚಿಸಲು 13 ತುರ್ತು ಲ್ಯಾಂಡಿಂಗ್ ಸ್ಟ್ರಿಪ್ ಸಿದ್ಧವಾಗಿದ್ದು, ಭಾರತೀಯ ವಾಯುಪಡೆಯಿಂದ(IAF) ಅನುಮತಿಗಾಗಿ ಕಾಯುತ್ತಿದ್ದೇವೆ. ಒಟ್ಟು 29 ಅಂತಹ ಲ್ಯಾಂಡಿಂಗ್ ಸೌಲಭ್ಯಗಳನ್ನು ನಿರ್ಮಿಸಲಾಗುವುದು ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿದ ಸಂದರ್ಶನದಲ್ಲಿ ಗಡ್ಕರಿ ತಿಳಿಸಿದ್ದಾರೆ.
ತುರ್ತು ಸಂದರ್ಭಗಳಲ್ಲಿ ಐಎಎಫ್ ಅದನ್ನು ಸ್ವಾಧೀನಪಡಿಸಿಕೊಳ್ಳುತ್ತದೆ.ಆದರೆ ಸುಗಮ ಸಂಚಾರಕ್ಕಾಗಿ ಸರ್ವೀಸ್ ರಸ್ತೆಯನ್ನು ಬಳಸಲಾಗುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಸೆಪ್ಟೆಂಬರ್ 2021 ರಲ್ಲಿ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗಡ್ಕರಿ ಅವರು ಉದ್ಘಾಟಿಸಿದ್ದರು.