Wednesday, July 6, 2022

Latest Posts

ಕೊಡಗು| 13 ಮಂದಿಗೆ ಕೊರೋನಾ ಸೋಂಕು ದೃಢ: ಒಟ್ಟು ಸೋಂಕಿತರೆಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆ ಹೊಸದಾಗಿ 13 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ.
ಫ್ಯುಮಿಗೇಷನ್ ಹಿನ್ನಲೆಯಲ್ಲಿ ಭಾನುವಾರ ಆರ್.ಟಿ.ಪಿಸಿಆರ್ ಪ್ರಯೋಗಾಲಯ ಮುಚ್ಚಿದ್ದರಿಂದ ರ್ಯಾಪಿಡ ಆಂಟಿಜೆನ್ ಪರೀಕ್ಷೆ ಮೂಲಕ ಸೋಮವಾರಪೇಟೆ ತಾಲೂಕಿನಲ್ಲಿ 4 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 9 ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 33,209ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 69 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಮುಕ್ತರಾದವರ ಸಂಖ್ಯೆ 32,313ರಷ್ಟಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 488 ಸಕ್ರಿಯ ಪ್ರಕರಣಗಳಿದ್ದು,ಕಳೆದ 24 ಗಂಟೆಗಳಲ್ಲಿ ಒಬ್ಬರು ಸೋಂಕಿಗೆ ಬಲಿಯಾಗುವುದರೊಂದಿಗೆ ಇದುವರೆಗೆ 408 ಮಂದಿ ಸಾವಿಗೀಡಾಗಿದ್ದಾರೆ. 86 ಕಂಟೈನ್ ಮೆಂಟ್ ವಲಯಗಳಿದ್ದು, ಪಾಸಿಟಿವಿಟಿ ದರ ಶೇ. 2.77ರಷ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss