ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮರಿಯಪ್ಪನಪಾಳ್ಯದಲ್ಲಿ ಶಂಕಿತ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ 13 ಮಂದಿಗೆ ಸುಟ್ಟ ಗಾಯಗಳಾಗಿವೆ. ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಕುಟುಂಬದಲ್ಲಿ ಕಾರ್ಯಕ್ರಮವೊಂದನ್ನು ಏರ್ಪಡಿಸಿದ್ದು, ವಿವಿಧ ಖಾದ್ಯಗಳನ್ನು ತಯಾರಿಸಲಾಗಿತ್ತು. ಅಡುಗೆ ಬಳಿಕೆ ರೆಗ್ಯುಲೇಟರ್ ಆಫ್ ಮಾಡಿರಲಿಲ್ಲ. ಇದರಿಂದ ಅನಿಲ ಸೋರಿಕೆಯಾಗಿದೆ.
ಬೆಳಗ್ಗೆ ಎದ್ದಂತೆಯೇ ಲೈಟ್ ಹಾಕಿದ್ದು, ಬೆಂಕಿ ಹೊತ್ತಿಕೊಂಡಿದೆ, ಮನೆಯ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳ ಭಾಗಶಃ ಸುಟ್ಟುಹೋಗಿವೆ. ನಂತರ ಪೊಲೀಸರಿಗೆ ನೆರೆ ಹೊರೆಯವರು ಕರೆ ಮಾಡಿ ಮಾತನಾಡಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.