ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು ಹೀಗಾಗಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.
ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ವಾಪಸ್ ಆಗಿದ್ದು, ವಿದ್ಯಾರ್ಥಿಗಳು ಕ್ಷೇಮವಾಗಿ ಬರಲು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವ್ಯವಸ್ಥೆ ಮಾಡಿದ್ದರು.
ಶ್ರೀನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳು ದೆಹಲಿಯ ಕರ್ನಾಟಕ ಭವನ ಎರಡರಲ್ಲಿ ಎಲ್ಲರೂ ಉಳಿಯಲು ವ್ಯವಸ್ಥೆ ಮಾಡಲಾಗಿದೆ.ತಡರಾತ್ರಿ ರೈಲಿನ ಮೂಲಕ ವಿದ್ಯಾರ್ಥಿಗಳು ದೆಹಲಿಗೆ ತಲುಪಿದ್ದಾರೆ. ಇದೇ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ವಿದ್ಯಾರ್ಥಿಗಳು ಧನ್ಯವಾದ ತಿಳಿಸಿದ್ದಾರೆ.