SHOCKING | ತಾಯಿಗೆ ಮನೆಯಲ್ಲಿಯೇ ಹೆರಿಗೆ ಮಾಡಿಸಿದ 13 ವರ್ಷದ ಬಾಲಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚೀನಾದ ಫುಜಿಯಾನ್ ಪ್ರಾಂತ್ಯದ 13 ವರ್ಷದ ಬಾಲಕನೊಬ್ಬ ತನ್ನ ತಾಯಿಗೆ ಅನಿರೀಕ್ಷಿತವಾಗಿ ಹೆರಿಗೆ ನೋವು ಆರಂಭವಾದಾಗ ಹೆದರದೆಯೇ ಮನೆಯಲ್ಲಿ ಮಗುವಿಗೆ ಜನ್ಮ ನೀಡಲು ಸಹಾಯ ಮಾಡಿದ್ದಾನೆ.

ಬಾಲಕ ತುರ್ತು ಕೇಂದ್ರಕ್ಕೆ ಕರೆ ಮಾಡಿ, 37 ವಾರಗಳ ಗರ್ಭಿಣಿಯಾಗಿರುವ ತಾಯಿಗೆ ನೀರು ಸೋರಿದ್ದು ತೀವ್ರ ನೋವಿನಿಂದ ಬಳಲುತ್ತಿದ್ದು, ಮಗುವಿನ ತಲೆ ಹೊರಗೆ ಬಂದಿದೆ ಎಂದು ಫೋನ್ ಮೂಲಕ ವೈದ್ಯಕೀಯ ಸಿಬ್ಬಂದಿಗೆ ತಿಳಿಸಿದ್ದಾನೆ. ಇದನ್ನು ಕೇಳಿಸಿಕೊಂಡು ತಾಯಿಯ ಯೋಗಕ್ಷೇಮದ ಬಗ್ಗೆ ಭಯಭೀತರಾದ ವೈದ್ಯರು ಕೆಲವು ಮಾರ್ಗದರ್ಶನ ನೀಡುವ ಮೂಲಕ ಹೆರಿಗೆ ಮಾಡಿಸಲು ಸಹಾಯ ಮಾಡಿದ್ದಾರೆ.

ಆಂಬ್ಯುಲೆನ್ಸ್ ಮನೆಗೆ ಬರುವ ವರೆಗೂ ಫೋನ್ ಮೂಲಕವೇ ವೈದ್ಯರು ಹುಡುಗನಿಗೆ ಸೂಚನೆ ನೀಡಿದ್ದು, ತಾಯಿಯನ್ನು ಹೇಗೆ ನೋಡಿಕೊಳ್ಳಬೇಕು, ಆ ಸಮಯದಲ್ಲಿ ಅವರನ್ನು ಶಾಂತಗೊಳಿಸುವುದು ಹೇಗೆ ಮತ್ತು ಮಗು ಜನನಕ್ಕೆ ಯಾವ ರೀತಿಯಲ್ಲಿ ಸಹಾಯ ಮಾಡಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ.

ವೈದ್ಯರ ಸೂಚನೆಗಳನ್ನು ಅನುಸರಿಸಿ, ಹದಿಹರೆಯದ ಹುಡುಗ ಆರೋಗ್ಯವಾಗಿರುವ ಗಂಡು ಮಗುವಿಗೆ ಜನ್ಮ ನೀಡಲು ತನ್ನ ತಾಯಿಗೆ ಸಹಾಯ ಮಾಡಿದ್ದಾನೆ. ಇನ್ನು ಹೊಕ್ಕುಳಬಳ್ಳಿಯನ್ನು ಬಿಗಿಗೊಳಿಸುವ ಸಮಯ ಬಂದಾಗ, ಹುಡುಗನಿಗೆ ಸ್ವಚ್ಛವಾದ ದಾರ ಸಿಗದಿದ್ದಾಗ. ವೈದ್ಯರು ಮಾಸ್ಕ್ ಸ್ಟ್ರಾಪ್ ಬಳಸಲು ಸಲಹೆ ನೀಡಿದ್ದು ಸೋಂಕು ಮತ್ತು ರಕ್ತಸ್ರಾವವನ್ನು ತಡೆಯಲು ಸಹಾಯ ಮಾಡಿದ್ದಾರೆ. ಸ್ವಲ್ಪ ಸಮಯದ ನಂತರ, ವೈದ್ಯಕೀಯ ಸಿಬಂದಿ ಮನೆಗೆ ಬಂದು ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ಸಾಗಿಸಿದ್ದು ಇಬ್ಬರ ಆರೋಗ್ಯವೂ ಚೆನ್ನಾಗಿದೆ ಎಂದು ವರದಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!