ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರಕ್ಕೊಳಗಾಗಿದ್ದ 13 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಕಾಂಪ್ಲಿಕೇಷನ್ಸ್‌ನಿಂದ ಮೃತಪಟ್ಟಿದ್ದಾಳೆ.
ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿ ಹೊಟ್ಟೆನೋವಿನಿಂದ ಒದ್ದಾಡಿ ಪ್ರಾಣಬಿಟ್ಟಿದ್ದಾಳೆ. ಸರ್ಫರಾಜ್ ಎಂಬಾತ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಜೀವ ಬೆದರಿಕೆ ಹಾಕಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿದ್ದು, ಗರ್ಭಿಣಿಯಾದ ಬಳಿಕ ವಿಷಯ ಬೆಳಕಿಗೆ ಬಂದಿದೆ.
ಶುಕ್ರವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದರು. ಹೊಟ್ಟೆನೋವಿನಿಂದ ಬಾಲಕಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. ಠಾಣೆಯಲ್ಲಿ ದೂರು ದಾಖಲಾಗಿದ್ದು, ಸರ್ಫರಾಜ್ ವಿಚಾರಣೆ ನಡೆಯುತ್ತಿದೆ.