ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು 1,301 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,44,764ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 17 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,248ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ರಾಜ್ಯದಲ್ಲಿ ಇಂದು 1,614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,88,520ಕ್ಕೆ ಏರಿಕೆಯಾಗಿದೆ. ಇನ್ನು 18,970 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,86,900 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,301 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.69ಕ್ಕೆ ಇಳಿದಿದೆ.