ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆಗಾವ್ಯಾಟ್ ಸೇರ್ಪಡೆ: ಕರ್ನಾಟಕ ಈಗ ದೇಶದಲ್ಲೇ ನಂಬರ್ 1

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆಗಾವ್ಯಾಟ್ ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಪ್ರಶಸ್ತಿ ಸ್ವೀಕರಿಸಿದರು.

2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ವಲಯಕ್ಕೆ 1331.48 ಮೆಗಾವ್ಯಾಟ್. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆಗಾವ್ಯಾಟ್ ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆಗಾವ್ಯಾಟ್ ಸೇರ್ಪಡೆಗೊಳಿಸಿರುವ ಗುಜರಾತ್‌ ಮೂರನೇ ಸ್ಥಾನದಲ್ಲಿದೆ. ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌, 2025ರ ಮೇ ವೇಳೆಗೆ ಪವನ ವಿದ್ಯುತ್ತಿನ ಸ್ಥಾಪಿತ ಸಾಮರ್ಥ್ಯ 7 ಸಾವಿರದ 351 ಮೆಗಾವ್ಯಾಟ್‌ನಷ್ಟಿತ್ತು. ಕಳೆದ ಆರ್ಥಿಕ ಸಾಲಿನಲ್ಲಿ 1ಸಾವಿರದ 331 ಮೆಗಾವ್ಯಾಟ್‌ಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ ಅಗ್ರಮಾನ್ಯ ಸ್ಥಾನದಲ್ಲಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!