Friday, June 2, 2023

Latest Posts

135 ಶಾಸಕರು ನಮ್ಮವರೇ, ಹೈಕಮಾಂಡ್ ಪಾದಕ್ಕೆ ಹಾಕಿದ್ದೀವಿ: ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್ ಗೆ ಸಿಎಂ ಆಯ್ಕೆ ದೊಡ್ಡ ತಲೆನೋವು ಆಗಿದ್ದು, ಹೀಗಾಗಿ 135 ಶಾಸಕರು ನಮ್ಮವರೇ, ನಾನು ಸೇರಿದಂತೆ ಹೈಕಮಾಂಡ್ ಪಾದಕ್ಕೆ ಹಾಕಿದ್ದೀವಿ. ನೋಡೋಣ ಏನು ತೀರ್ಮಾನ ತೆಗೆದುಕೊಳ್ತಾರೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಸಾತನೂರಿನ ಆಕಾಶ್ ಫಾರಂ ನಿಂದ ತೆರಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುತೇಕ ಶಾಸಕರು ನನಗೆ ಸೀಕ್ರೆಟ್ ವೋಟ್ (Vote) ಮಾಡಿದ್ದಾರೆ ಅನ್ನೊ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಠಕ್ಕರ್ ನೀಡಿದರು.

ಸಂತೋಷ ಯಾರು ಏನಾದ್ರು ಹೇಳಲಿ. ನನ್ನ ಬಳಿ ಯಾವ ಶಾಸಕರಿಲ್ಲ. 135 ಶಾಸಕರು ನಮ್ಮವರೇ, ನಾನು ಸೇರಿದಂತೆ ಹೈಕಮಾಂಡ್ ಪಾದಕ್ಕೆ ಹಾಕಿದ್ದೀವಿ ಎಂದರು.

ನಾವು ಒಂದ್ ಲೈನ್ ರೆಜಲ್ಯೂಷನ್ ಮಾಡಿದ್ದೇವೆ. ನನಗೆ ಯಾವ ಶಾಸಕರು ಏನ್ ಮಾಡಿದ್ದಾರೆ ಗೊತ್ತಿಲ್ಲ. ನನ್ನ ಜೊತೆಗೆ 135 ಶಾಸಕರು ಇದ್ದಾರೆ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ 135 ಶಾಸಕರನ್ನ ಸೋನಿಯಾ ಗಾಂಧಿಗೆ ಅರ್ಪಿಸಿದ್ದೇನೆ. ನನ್ನ ಹತ್ರ ಯಾರು ಇಲ್ಲ, ಕಾಂಗ್ರೆಸ್ ಪಾರ್ಟಿಯಲ್ಲಿ 135 ಜನ ಇದ್ದಾರೆ. ನನ್ನ ಸೇರಿಸಿ 135 ಶಾಸಕರು ಕಾಂಗ್ರೆಸ್ ನಲ್ಲಿ ಇದ್ದಾರೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!