Thursday, August 18, 2022

Latest Posts

ನಿನ್ನೆ ದೇಶದಲ್ಲಿ 13,819 ಮಂದಿ ಸೋಂಕಿತರು ಗುಣಮುಖ: ಹಾಗಿದ್ದರೆ ಸಕ್ರಿಯ ಸೋಂಕಿತರ ಸಂಖ್ಯೆ ಎಷ್ಟು?

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಳೆದ 24 ಗಂಟೆಗಳಲ್ಲಿ 16,838 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 113 ಮಂದಿ ಬಲಿಯಾಗಿದ್ದಾರೆ.

ನಿನ್ನೆ ಒಂದೇ ದಿನ 16,838 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,11,73,761ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 1,76,319 ಮಂದಿ ಸಕ್ರಿಯ ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಗುರುವಾರ ಒಂದೇ ದಿನ ದೇಶದಲ್ಲಿ 13,819 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,08,39,894ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ನಿನ್ನೆ 113 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಒಟ್ಟು ಮೃತರಾದವರ ಸಂಖ್ಯೆ 1,57,548ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!