ಹಾಸನ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಮಂಗಳವಾರ ಪರೀಕ್ಷೆಗೊಳಪಟ್ಟಿದ್ದ ಚನ್ನರಾಯಪಟ್ಟಣ ಮೂಲದ ನಾಲ್ವರಲ್ಲಿ ಮತ್ತೇ ಕೋವಿಡ್ ದೃಢಪಟ್ಟಿದೆ.
ಸೋಂಕಿತರು ಸೋಮವಾರ ರಾತ್ರಿ ಮುಂಬೈನಿಂದ ಚನ್ನರಾಯಪಟ್ಟಣಕ್ಕೆ ಆಗಮಿಸಿದ್ದ ಪತಿ, ಪತ್ನಿ ಸೇರಿದಂತೆ ಇಬ್ಬರು ಮಕ್ಕಳಗೆ ಮಂಗಳವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ವ್ಯಾಬ್ ಪರೀಕ್ಷೆ ನಡೆಸಲಾಗಿತ್ತು. ಬುಧವಾರ ಪರೀಕ್ಷೆಗೊಳಪಟ್ಟವರ ವರದಿ ಬಂದಿದ್ದು ಪಾಸಿಟಿವ್ ಇರುವುದು ದೃಢಪಟ್ಟಿದೆ.
ಬುಧವಾರದ ನಾಲ್ಕು ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9ಕ್ಕೇರಿದ್ದು,ಆತಂಕ ಹುಟ್ಟುಹಾಕದೆ. ಸೋಂಕಿತರಲ್ಲಿ ಒಬ್ಬರ ಸ್ಥಿತಿ ಗಂಭೀರ ಎಂದೇಳಲಾಗಿದೆ. ಸೋಂಕು ಹಿನ್ನಲೆಯಲ್ಲಿ ಚನ್ನರಾಯಪಟ್ಟಣದಲ್ಲಿ 144 ಸೆಕ್ಷನ್ ಮತ್ತಷ್ಟು ಬಿಗಿಗೊಳಿಸಿದ್ದು, ಪೊಲೀಸರು ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅರಿವು ಮೂಡಿಸುತ್ತಿದ್ದಾರೆ.