Tuesday, July 5, 2022

Latest Posts

ಮುಂಗಾರು ಪ್ರಾರಂಭವಾಗುವ ಸೂಚನೆ: ಸೂಕ್ಷ್ಮ ಪ್ರದೇಶಗಳಿಗೆ ಹೆಚ್ಚಿನ ಗಮನ: ಜಿಲ್ಲಾಧಿಕಾರಿ ಮುಲೈ ಮುಹಿಲನ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಬನವಾಸಿ:

ಸದ್ಯದಲ್ಲಿ ಮುಂಗಾರು ಆರಂಭವಾಗಲಿದ್ದು ಈಗಾಗಲೇ ಗುರುತಿಸಲಾಗಿರುವ ಸೂಕ್ಷ್ಮ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು.
ಅವರು ಶುಕ್ರವಾರ ಬನವಾಸಿಯ ಪ್ರವಾಹ ಪೀಡಿತವಾಗುವ ಪ್ರದೇಶಗಳಾದ ಅಜ್ಜರಣಿ, ಭಾಶಿ, ಮೊಗವಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಮುಂಗಾರು ಮಳೆಗೆ ಪ್ರವಾಹ ಉಂಟಾಗಿ ಆಗುವ ಅನಾಹುತಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾತನಾಡುತ್ತಾ, ಈ ಹಿಂದೆ ಅತಿವೃಷ್ಟಿಯಿಂದ ಉಂಟಾದ ಸಮಸ್ಯೆಗಳ ಆಧಾರದ ಮೇಲೆ ಈ ಭಾರಿಯೂ ಮುಂಗಾರಿನಲ್ಲಿ ಎದುರಾಗಬಹುದಾದ ಸಂಭವನೀಯ ಅಪಾಯಗಳನ್ನು ಅಂದಾಜಿಸಿ ಇಂದಿನಿಂದಲೇ ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು. ಕಂದಾಯ ಇಲಾಖೆ, ಗ್ರಾಮ ಪಂಚಾಯತ್, ಅರಣ್ಯ ಇಲಾಖೆ, ಅಗ್ನಿಶಾಮಕ, ತೋಟಗಾರಿಕೆ, ಪೋಲಿಸ್ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸದಾ ಜಾಗೃತರಾಗಿರಬೇಕು. ಈ ಭಾಗದಲ್ಲಿ ಪ್ರವಾಹದಿಂದ ಜನರಿಗೆ ತೊಂದರೆಯಾಗುವುದಿಲ್ಲ ಅದರೆ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸುತ್ತದೆ ಇದಕ್ಕಾಗಿ
ಪೂರ್ವಸಿದ್ಧತೆಯನ್ನು ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಇಳಿಮುಖ ಆಗಿದ್ದರು ಈ ಭಾಗದಲ್ಲಿ ಅದರ ಪ್ರಮಾಣ ಕಡಿಮೆಯಾಗಿಲ್ಲ. ಈ ಬಗ್ಗೆ ಅಧಿಕಾರಿಗಳ ಜೊತೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ತಾಲೂಕಿನಲ್ಲಿ ರಸ ಗೊಬ್ಬರ ಪೂರೈಕೆಯಲ್ಲಿ ತಲೆದೋರಿರುವ ಸಮಸ್ಯೆಯನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸುತ್ತೆನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿರಸಿ ಸಹಾಯಕ ಆಯುಕ್ತೆ ಆಕೃತಿ ಬನ್ಸಾಲ್, ತಹಶೀಲ್ದಾರ ಎಮ್. ಆರ್ ಕುಲಕರ್ಣಿ, ಡಿ.ವಾಯ್ ಎಸ್.ಪಿ ರವಿ ನಾಯ್ಕ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಧುಕರ ನಾಯ್ಕ್, ಹಾಗೂ ವಿವಿಧ ಇಲಾಖೆಯ ತಾಲೂಕು ಅಧಿಕಾರಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss