Tuesday, June 28, 2022

Latest Posts

ಕುಂಭಮೇಳದಲ್ಲಿ ಪಾಲ್ಗೊಂಡವರಿಗೆ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕುಂಭಮೇಳದಲ್ಲಿ ಪಾಲ್ಗೊಂಡ 2000ಕ್ಕೂ ಹೆಚ್ಚು ಜನರಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ, ಮಧ್ಯಪ್ರದೇಶ, ದೆಹಲಿ, ಒಡಿಶಾ ಸೇರಿದಂತೆ ಅನೇಕ ರಾಜ್ಯಗಳು ಕುಂಭಮೇಳದಿಂದ ಹಿಂದಿರುಗುವ ಯಾತ್ರಿಗಳಿಗೆ 14 ದಿನ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಿದೆ.

ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್ಸಾಗುವ ಯಾತ್ರಿಗಳು 14 ದಿನ ಹೋಮ್ ಕ್ವಾರಂಟೈನ್ ಆಗಬೇಕು, ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದೆಹಲಿ ಸರ್ಕಾರ ಎಚ್ಚರಿಕೆ ನೀಡಿದೆ.

ದೆಹಲಿಯಿಂದ ಹೋಗಿ ಕುಂಭಮೇಳದಲ್ಲಿ ಪಾಲ್ಗೊಂಡವರು ತಮ್ಮ ಮಾಹಿತಿಯನ್ನು ಸರ್ಕಾರದ ವೆಬ್ ಸೈಟ್ ಗೆ ನೀಡಬೇಕು. ಮಾಹಿತಿ ನೀಡದಿದ್ದಲ್ಲಿ ಅವರನ್ನು ಸಾಂಸ್ಥಿಕ ಸಂಪರ್ಕ ತಡೆ ಕೇಂದ್ರಕ್ಕೆ ಕಳುಹಿಸಲಾಗುತ್ತದೆ ಎಂದು ಎಚ್ಚರಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss