ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ಯಾಂಕ್‌ಗೆ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಜೆಟ್ ಏರ್‌ವೇಸ್‌ನ ಸ್ಥಾಪಕ ನರೇಶ್ ಗೋಯಲ್ ಗೆ ಪಿಎಂಎಲ್‌ಎ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೆನರಾ ಬ್ಯಾಂಕ್‌ಗೆ ₹ 538 ಕೋಟಿ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 74 ವರ್ಷದ ಗೋಯಲ್‌ರನ್ನು ಪಿಎಂಎಲ್‌ಎ ಕಾಯ್ದೆಯಡಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದರು.
ಇತ್ತ ದಕ್ಷಿಣ ಮುಂಬೈನ ಆರ್ಥರ್ ರಸ್ತೆಯ ಜೈಲಿಗೆ ಕಳುಹಿಸಬೇಕು ಎಂಬ ಗೋಯಲ್ ಮನವಿಯನ್ನು ಕೋರ್ಟ್ ಪುರಸ್ಕರಿಸಿತು.
ಪಿಎಂಎಲ್‌ಎ ವಿಶೇಷ ಕೋರ್ಟ್‌ನ ನ್ಯಾಯಾಧೀಶರಾದ ಎಂ.ಜಿ.ದೇಶಪಾಂಡೆ ಅವರ ಎದುರು ಗುರುವಾರ ಹಾಜರುಪಡಿಸಲಾಗಿತ್ತು.ಬಳಿಕ, ತಾವು ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಕುಟುಂಬ ಹಾಗೂ ಪರಿಣತ ವೈದ್ಯರಿಂದ ನಿತ್ಯ ಆರೋಗ್ಯ ತಪಾಸಣೆಗೆ ಒಳಗಾಗಲು ಅನುವು ಮಾಡಿಕೊಡಬೇಕು. ನಿಯಮಿತವಾಗಿ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎಂದು ಕೋರಿ ಗೋಯಲ್ ಅರ್ಜಿ ಸಲ್ಲಿಸಿದರು.
ಈ ಅರ್ಜಿ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ಕೋರ್ಟ್ ಇ.ಡಿ ಪರ ವಕೀಲರಿಗೆ ಸೂಚಿಸಿತು.