ಎಪಿ ಸಿಎಂ ಜಗನ್‌ ಸಹೋದರಿಗೆ ಸಂಕಷ್ಟ: ಚಂಚಲಗೂಡ ಜೈಲಿಗೆ ಶಿಫ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ಟಿಪಿ ಅಧ್ಯಕ್ಷೆ ಶರ್ಮಿಳಾ ಅವರನ್ನು ನಾಂಪಲ್ಲಿ ನ್ಯಾಯಾಲಯ ರಿಮಾಂಡ್ ಮಾಡಿದೆ. 14 ದಿನಗಳ ನ್ಯಾಯಾಂಗ ಬಂಧನವನ್ನು (ಮೇ 8 ರವರೆಗೆ) ವಿಧಿಸಲಾಗಿದೆ. ಮತ್ತೊಂದೆಡೆ ಶರ್ಮಿಳಾ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಶರ್ಮಿಳಾ ಜಾಮೀನು ಅರ್ಜಿಗೆ ಕೌಂಟರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದೆ.

ಇದೀಗ ಪೊಲೀಸರು ಶರ್ಮಿಳಾ ಅವರನ್ನು ನಾಂಪಲ್ಲಿ ನ್ಯಾಯಾಲಯದಿಂದ ಚಂಚಲ್ ಗುಡಾ ಜೈಲಿಗೆ ಸ್ಥಳಾಂತರಿಸಿದ್ದಾರೆ. ಈ ಪ್ರಕರಣದಲ್ಲಿ ಶರ್ಮಿಳಾ ಅವರನ್ನು ಎ-1, ಬಾಬು (ಶರ್ಮಿಳಾ ಚಾಲಕ) ಎ2 ಮತ್ತು ಜೇಕಬ್ ಅವರನ್ನು ಎ-3 ಅರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ.

ಕರ್ತವ್ಯ ನಿರತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಹಲ್ಲೆ ನಡೆಸಿದ ಆರೋಪದ ಮೇಲೆ ಶರ್ಮಿಳಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಶರ್ಮಿಳಾ ಅವರನ್ನು ಪೊಲೀಸರು ಬಂಧಿಸಿದ್ದರು. ಬೆಳಗ್ಗೆಯಿಂದ ಜ್ಯೂಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಬಳಿಕ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯ ರಿಮಾಂಡ್‌ಗೆ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!